ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ವಿಚಾರ ಗೊಂದಲಕ್ಕೆ ತಾತ್ಕಾಲಿಕ ತೆರೆ ಬಿದ್ದಿರುವ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವರು ಸಿದ್ದರಾಮಯ್ಯ ಆಪ್ತರ ಬೆಂಬಲ ಗಳಿಸುವ ಪ್ರಯತ್ನ ಆರಂಭಿಸಿದ್ದಾರೆ.
ಈ ನಿಟ್ಟಿನಲ್ಲಿ ಅವರು ಅಧಿಕೃತ ಸಭೆ, ಸಮಾರಂಭಗಳನ್ನೇನೂ ಆಯೋಜಿಸದೆ ಹೋದರೂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಚಿವರು, ಶಾಸಕರು, ಮುಖಂಡರು ಸಾಂದರ್ಭಿಕವಾಗಿ ಎದುರಾದ ಕಡೆ, ಸಭೆ-ಸಮಾರಂಭಗಳಲ್ಲೇ ಅವರ ಜೊತೆ ಚರ್ಚೆ ನಡೆಸಿ. ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆ, ಸಲಹೆ ಮೇರೆಗೆ ಡಿಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಹಾಗೂ ಅವರ ಆಪ್ತ ವಲಯದ ನಾಯಕರೊಂದಿಗಿರುವ ಭಿನ್ನಾಭಿಪ್ರಾಯಗಳನ್ನು ಮುರಿಯಲು ಯತ್ನ ನಡೆಸುತ್ತಿದ್ದಾರೆ. ಆದರೆ, ಸಿದ್ದು ಆಪ್ತರು ಅದಕ್ಕೆ ಆಸ್ಪದ ನೀಡುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ
