ಅಧಿವೇಶನದಲ್ಲಿ 'ದಳಪತಿ' ಇಲ್ಲದ ದಳ: HDK ಅನುಪಸ್ಥಿತಿ: JDSಗೆ ಸಾರಥಿಯ ಚಿಂತೆ

Waves of Karnataka


 ಬೆಳಗಾವಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿ ಒಂದು ವಾರಕ್ಕೂ ಹೆಚ್ಚು ಸಮಯವಾಗಿದ್ದು, ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಲಾಗಿದೆ. ಆದರೆ, ಇದರ ಲಾಭವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಜೆಡಿಎಸ್ ವಿಫಲವಾಗುತ್ತಿರುವಂತೆ ತೋರುತ್ತಿದೆ.

ಇದಕ್ಕೆ ಪ್ರಮುಖ ಕಾರಣ ಹೆಚ್‌ಡಿ ಕುಮಾರಸ್ವಾಮಿ ಅವರ ಅನುಪಸ್ಥಿತಿ. ಕುಮಾರಸ್ವಾಮಿ ಅವರು ದಾಖಲೆ ಸಹಿತವಾಗಿ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸುತ್ತಿದ್ದರು. ಇವರ ನಾಯಕತ್ವದಲ್ಲಿ ಸದನದಲ್ಲಿ ಜೆಡಿಎಸ್ ಕೂಡಾ ಸಕ್ರಿಯವಾಗಿ ಭಾಗಿಯಾಗುತ್ತಿತ್ತು. ಆದರೆ, ಇದೀಗ ಎಚ್‌ಡಿಕೆ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಕಾರಣ, ಜೆಡಿಎಸ್ ಪಕ್ಷಕ್ಕೆ ಅವರ ಅನುಪಸ್ಥಿತಿ ಕಾಡಲು ಶುರುವಾಗಿದೆ.

ರಾಜ್ಯದಲ್ಲಿ ಪಕ್ಷ ಸಂಘಟನೆಗೂ ಗಮನ ಹರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದರೆ, ಸದನದಲ್ಲಿ ಜೆಡಿಎಸ್ ಪಕ್ಷ ವಿರೋಧ ಪಕ್ಷವಾಗಿ ಆಡಳಿತ ಪಕ್ಷದ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಸಾಧ್ಯವಾಗುತ್ತಿಲ್ಲ.