ಚಿನ್ನಸ್ವಾಮಿ ಬಿಟ್ಟು IPL ಎಲ್ಲೂ ಹೋಗಲ್ಲ! ಪಂದ್ಯಗಳು ಬೆಂಗಳೂರಿನಲ್ಲೇ ನಡೆಸುತ್ತೇವೆ ಎಂದ ಡಿಕೆ ಶಿವಕುಮಾರ್

Waves of Karnataka


 ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೆಎಸ್ ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ದುರ್ಘಟನೆ ಬಳಿಕ ಐಪಿಎಲ್ ಸೇರಿದಂತೆ ಪ್ರಮುಖ ಪಂದ್ಯಗಳು ಈ ಕ್ರೀಡಾಂಗಣದಿಂದ ಸ್ಥಳಾಂತರವಾಗಿರುವ ಬಗ್ಗೆ ಕೇಳಿದಾಗ, "ಇದು ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಗೌರವದ ವಿಚಾರ.

ಮುಂದಿನ ಐಪಿಎಲ್ ಪಂದ್ಯಗಳನ್ನು ಇಲ್ಲೇ ನಡೆಸುವಂತೆ ಕ್ರಮ ಕೈಗೊಳ್ಳುತ್ತೇವೆ" ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಯಾವೆಲ್ಲಾ ಪಂದ್ಯಗಳಿವೆಯೋ ಅದಕ್ಕೆ ಅವಕಾಶ ನೀಡುತ್ತೇವೆ" ಎಂದು ತಿಳಿಸಿದರು