ಕೇಂದ್ರ ಸರ್ಕಾರ ಎಂಜಿಎನ್‌ಆರ್‌ಇಜಿಎ ಬದಲಿಗೆ ಜಾರಿಗೆ ತರುತ್ತಿರುವ ವಿಕಸಿತ್ ಭಾರತ್ - ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ, 2025(ವಿಬಿ–ಜಿ ರಾಮ್ ಜಿ ಮಸೂದೆ) ಕುರಿತು ಚರ್ಚಿಸಲು ಎರಡು ದಿನಗಳ ವಿಶೇಷ ಅಧಿವೇಶನ ಕರೆದಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧ ಪಕ್ಷ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ ಶನಿವಾರ ಸ್ವಾಗತಿಸಿವೆ.
ಇಂದು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ವಿಬಿ–ಜಿ ರಾಮ್ ಜಿ ಮಸೂದೆ ಬಗ್ಗೆ ಕಾಂಗ್ರೆಸ್ "ತಪ್ಪು ಮಾಹಿತಿಯನ್ನು ಹರಡುತ್ತಿದೆ" ಎಂದು ಆರೋಪಿಸಿದರು.
"ವಿಬಿ-ಜಿ ರಾಮ್ ಜಿ ಕುರಿತು ಕಾಂಗ್ರೆಸ್ ಸರ್ಕಾರ ಸುಳ್ಳು ಆರೋಪ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ವಿಶೇಷ ಅಧಿವೇಶನವನ್ನು ಕರೆಯಲು ಬಯಸಿದ್ದಾರೆ ಮತ್ತು ನಾವು ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ" ಎಂದು ವಿಜಯೇಂದ್ರ ಹೇಳಿದರು
