ಮುಖ್ಯಮಂತ್ರಿ ಪಟ್ಟಕ್ಕಾಗಿ ಎಲ್ಲಾ ರೀತಿಯ ಕಸರತ್ತು ಮಾಡುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ನೀಡಿದ್ದು, ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿರಲು ನಿರ್ಧರಿಸಿದೆ ಎನ್ನಲಾಗಿದೆ.
ಈ ಮಧ್ಯೆ ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಹಿರಿಯ ವೀಕ್ಷಕರಾಗಿ ನೇಮಕಗೊಂಡಿರುವ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ಸಿಗನಾಗಿ, ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ಗುರುವಾರ ಹೇಳಿದ್ದಾರೆ.
ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಮತ್ತು ಜಾರ್ಖಂಡ್ ಮಾಜಿ ಶಾಸಕ ಬಂಧು ಟಿರ್ಕಿ ಅವರೊಂದಿಗೆ ಶಿವಕುಮಾರ್ ಅವರನ್ನು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಪಕ್ಷದ ಹಿರಿಯ ವೀಕ್ಷಕರಾಗಿ ಕಾಂಗ್ರೆಸ್ ಬುಧವಾರ ನೇಮಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ಸದ್ಯಕ್ಕೆ ಮುಂದೂಡಿಕೆಯಾಗಿದೆ
